Breaking
21 Jun 2026, Sun

ರೋಹನ್ ಕಾರ್ಪೊರೇಶನ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದರಕ್ಷೆ ವಿತರಣೆ

ಮಂಗಳೂರು: ನಗರದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ ಸೆ. 29 ರಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಿಸಲಾಯಿತು.

ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಅವರು “ಪೌರ ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ನಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ” ಎಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರು, ಪೌರ ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್ ನ ಸಮಾಜಮುಖಿ ಕಾರ್ಯವನ್ನು ಮೆಚ್ಚಿ, ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀರವಿಚಂದ್ರ ನಾಯಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *