ಉಡುಪಿ: ಬಸ್ ಮಾಲೀಕ ಸೈಫುದ್ದಿನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿ 6 ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಗಳನ್ನು ಮಹಮದ್ ಫೈಸಲ್ ಖಾನ್ (27), ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಎಂದು ಗುರುತಿಸಲಾಗಿದೆ.

2020ರಲ್ಲಿ ಹಿರಿಯಡ್ಕ ಪೋಲಿಸ್ ಠಾಣೆಯಲ್ಲಿ ಮೊಹಮ್ಮದ್ ಶರೀಫ್ ವಿರುದ್ಧ ಮೊದಲು ಪ್ರಕರಣ ದಾಖಲಾಗಿದ್ದು, ಮಹಮದ್ ಫೈಸಲ್ ಖಾನ್ ಸೈಫ್ ಅವರ ಆಪ್ತನಾಗಿ ಕೆಲಸ ಮಾಡುತ್ತಿದ್ದವನು. ಇವರು ಸೈಫ್ ಅವರನ್ನು ಕೊಡವೂರಿನ ನಿವಾಸಕ್ಕೆ ಕರೆದುಕೊಂಡು ಬಂದು ರಾಡ್, ಮಚ್, ನಿಂದ ಹತ್ಯೆ ಮಾಡಿದ್ದಾರೆ.

ಪ್ರಕರಣದ ತನಿಖೆಗೆ ಇನ್ನಷ್ಟು ದಿನಗಳು ಬೇಕಾಗಲಿದ್ದು ಹೀಗಾಗಿ ಆರೋಪಿಗಳನ್ನು 6 ದಿನ ಪೋಲಿಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.




