Breaking
21 Sep 2026, Mon

ಅಪರಿಚಿತ ವಾಹನ ಬೈಕ್‌ ಗೆ ಡಿಕ್ಕಿ : ಬೈಕ್‌ ಸವಾರ ಸಾವು

ಪಡುಬಿದ್ರೆ: ಬೈಕ್‌ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು (ಸೆ.30) ಬೆಳಗ್ಗಿನ ಜಾವ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ರಮೇಶ್‌ ಹೆಗ್ಡೆ(52) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *