Breaking
21 Mar 2026, Sat

ಸ್ನಾನಕ್ಕೆಂದು ಕೆರೆಗೆ ಇಳಿದ ವ್ಯಕ್ತಿ ಸಾವು

ಕಾಸರಗೋಡು: ಬೇಡಡ್ಕ ಸಮೀಪದ ಕೆರೆಯಲ್ಲಿ ಸ್ನಾನಕ್ಕೆಂದು ಇಳಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕುತ್ತಿಕೋಲು ಪಳ್ಳತುಂಗಲ್‌ ನ ಜೇಮ್ಸ್ (58 ವ) ಎಂದು ಗುರುತಿಸಲಾಗಿದೆ. ಇವರು ಮೆಡಿಕಲ್ ಶಾಪ್ ನಡೆಸುತ್ತಿದ್ದರು.

ಕುಟುಂಬಸ್ಥರೊಂದಿಗೆ ಬೇಡಡ್ಕದ ಕೆರೆಯಲ್ಲಿ ಸ್ನಾನಕ್ಕೆಂದು ಇಳಿದ ಜೇಮ್ಸ್ ಸುಮಾರು ಹೊತ್ತು ಮೇಲಕ್ಕೆ ಬಾರದೇ ಮುಳುಗಿ ಹೋಗಿದ್ದರು. ಕುಟುಂಬಸ್ಥರು ತಕ್ಷಣವೇ ಬೊಬ್ಬೆ ಹಾಕಿದಾಗ ಸ್ಥಳೀಯರು ಧಾವಿಸಿ ಅವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಈ ಸಂಬಂಧ ಬೇಡಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *