Breaking
21 Mar 2026, Sat

ಸೆ.30: ಸಿದ್ಧಕಟ್ಟೆಯಲ್ಲಿ ದಸರಾ ಭವ್ಯ ಶೋಭಾಯಾತ್ರೆ

ಬಂಟ್ವಾಳ: ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ವತಿಯಿಂದ ಸೆ. 29 ರಂದು ಆರಂಭಗೊಂಡ 7 ನೇ ವರ್ಷದ ‘ಸಿದ್ಧಕಟ್ಟೆ ದಸರಾ’ ಕಾರ್ಯಕ್ರಮವು ಇಂದು (ಸೆ.30) ನಡೆಯಲಿದೆ.

ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆಯುವ ಈ ಧಾರ್ಮಿಕ ಸಭೆಯಲ್ಲಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಧಾರ್ಮಿಕ ಭಾಷಣ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಬಿ.ಮಂಜುನಾಥ ಭಂಡಾರಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರವಿಶಾಂಕರ ಶೆಟ್ಟಿ ಬಡಾಜೆ, ಸುಬ್ರಹ್ಮಣ್ಯ ಕ್ಷೇತ್ರದ ಅಧ್ಯಕ್ಷ ಹರೀಶ ಇಂಜಾಡಿ, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ದೇವರಿಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು ಭಕ್ತಬಿಮಾನಿಗಳು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಜೆ 6 ಗಂಟೆಗೆ ಭವ್ಯ ಶೋಭಾಯಾತ್ರೆಯು ನಡೆಯಲಿದ್ದು ಬಳಿಕ ಸ್ಥಳೀಯ ಪುಚ್ಚಮೊಗರು ಫಲ್ಗುಣಿ ನದಿಯಲ್ಲಿ ವಿಸರ್ಜಣೆಗೊಳ್ಳಲಿದೆ.

Leave a Reply

Your email address will not be published. Required fields are marked *