ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದೆ ವಾಹನಗಳನ್ನು ರಸ್ತೆಗೆ ಇಳಿಸುವವರಿಗೆ ಬೆಂಗಳೂರು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವವರು ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ ಅಥವಾ ನಂಬರ್ ಪ್ಲೇಟ್ ವಿಕಾರಗೊಳಿಸಿ ಓಡಾಡುತ್ತಿದ್ದಾರೆ. ಅಂತವರನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಲಿದೆ. ಇಂತಹ ವಾಹನಗಳು ಕಂಡುಬಂದಲ್ಲಿ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಬೆಂಗಳೂರು ಪಶ್ಚಿಮ ವಿಭಾಗ ಒಂದರಲ್ಲೇ 40ಕ್ಕೂ ಹೆಚ್ಚು ವಾಹನ ಸವಾರರ ವಿರುದ್ಧ ಈಗಾಗಲೆ ವಂಚನೆ ಪ್ರಕರಣ ದಾಖಲಾಗಿದೆ. ಒಂದು ರಾತ್ರಿಯಲ್ಲಿ ನಗರದಾದ್ಯಂತ ಸುಮಾರು 1,000 ವಾಹನಗಳನ್ನ ಪೊಲೀಸರು ಸೀಜ್ ಮಾಡಿದ್ದರು. ಕೆಲವರು ಸರಿಯಾದ ಕಾರಣ ನೀಡಿ ವಾಹನ ಬಿಡಿಸಿಕೊಂಡು ಹೋದರೆ, ಉಳಿದವರು ಸರಿಯಾದ ಕಾರಣ ನೀಡದಿರುವ ಹಿನ್ನೆಲೆ ಅಂತವರ ವಿರುದ್ಧ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.





