ಬಂಟ್ವಾಳ: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೂಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ ( 68) ಎಂದು ಗುರುತಿಸಲಾಗಿದೆ.

ಸುಮಾರು 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಕಾಣೆಯಾಗಿದ್ದು, ಅದೇ ದುಃಖದಲ್ಲಿ ಇವರು ಮಾನಸಿಕವಾಗಿ ಬಳಲುತ್ತಿದ್ದರು. ಜೊತೆಗೆ ರಕ್ತದೊತ್ತಡ ಕಾಯಿಲೆ ಇತ್ತು. ಈ ಕಾರಣಗಳಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮೃತರ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



