Breaking
21 Mar 2026, Sat

ಬೆಳ್ತಂಗಡಿಯ ಬದ್ಯಾರ್ ನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಬೆಳ್ತಂಗಡಿ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರಿನಲ್ಲಿ ಅ.1 ರಂದು ಬೆಳಗ್ಗೆ ನಡೆದಿದೆ.

ಅಳದಂಗಡಿ ಕಡೆಯಿಂದ ಬೆಳ್ತಂಗಡಿ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *