Breaking
5 Aug 2026, Wed

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಕಾಏಕಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕೆಲವು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

83 ವರ್ಷದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *