Breaking
4 Feb 2026, Wed

ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ನಿಧ‌ನ

ಬೆಂಗಳೂರು: ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಅವರು ನಿಧ‌ನರಾಗಿದ್ದಾರೆ.

ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಮಲಶ್ರೀ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾವೇರಿ ಕನ್ನಡ ಮೀಡಿಯಂ, ಗಟ್ಟಿಮೇಳ, ಪತ್ತೆದಾರಿ ಪ್ರತಿಭಾ ಹೀಗೆ ಸಾಕಷ್ಟು ಧಾರಾವಾಹಿಗಳಲ್ಲಿ , ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ನಾಟಕದಲ್ಲಿಯೂ ಅಭಿನಯಿಸಿದ್ದಾರೆ.

ಇವರ ಅಗಲುವಿಕೆಗೆ ಅಭಿಮಾನಿ ಹಾಗೂ ಕಲಾವಿದರ ಬಳಗ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *