ಬೆಳ್ತಂಗಡಿ: ತಾಲೂಕಿನ ಕೊಯ್ಯೂರು ಗ್ರಾಮದ ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ನವರಾತ್ರಿಯ ಪ್ರಯುಕ್ತ ಆಯುಧಪೂಜೆ ಹಾಗೂ ವಾಹನ ಪೂಜೆ ಯು ಅ.1 ರಂದು ನಡೆಯಿತು.

ಅರ್ಚಕರಾದ ಶ್ರೀ ಅನಂತರಾಮ ಶಬರಾಯ ರವರ ಪೌರೋಹಿತ್ಯದಲ್ಲಿ ಪೂಜೆ -ಪುನಸ್ಕಾರಗಳನ್ನು ನೆರವೇರಿಸಲಾಯಿತು.
ಬಳಿಕ ಸಿಹಿ ತಿಂಡಿಯನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭ ರಿಕ್ಷಾ ಚಾಲಕ-ಮಾಲಕರ ಸಂಘದ ಪದಾಧಿಕಾರಿಗಳು, ಊರ ನಾಗರಿಕರು ಉಪಸ್ಥಿತರಿದ್ದರು.



