Breaking
23 Dec 2024, Mon

ಕುರ್ಚಿ ಫೈಟ್ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಭೇಟಿಯಾದ ವಿಜಯೇಂದ್ರ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕ್ಷೇತ್ರದ ಹಲವು ಮುಖಂಡರೊಂದಿಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್ ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ನಮ್ಮ ಕ್ಷೇತ್ರದ ಮುಖಂಡರೊಂದಿಗೆ ಸಚಿವರನ್ನು ಭೇಟಿ ಮಾಡಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಎರಡು ಹೈವೇ ಟೋಲ್ ಗಳು ಬಂದಿವೆ. ಇದರಿಂದ ಮೂರು ಜಿಲ್ಲೆಗಳ ಜನರಿಗೆ ಸಮಸ್ಯೆ, ಬಡವರಿಗೆ ತೊಂದರೆ ಆಗುತ್ತಿದೆ. ಟೋಲ್ ಸ್ಥಳಾಂತರ ಮಾಡುವಂತೆ ಒತ್ತಾಯಿಸಿದ್ದೇವೆ. ಸಚಿವರು ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

ಈ ಸಮಯದಲ್ಲೇ ಜಾರಕಿಹೊಳಿ ಜೊತೆ ವಿಜಯೇಂದ್ರ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *