Breaking
25 Sep 2026, Fri

ಉಡುಪಿ ಅಂಬಲಪಾಡಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನಕಳವಿಗೆ ಯತ್ನ:ಇಬ್ಬರು ಮಹಿಳೆಯರು ಅರೆಸ್ಟ್

ಉಡುಪಿ: ನವರಾತ್ರಿ ಸಂಭ್ರಮದ ಜನಜಂಗುಳಿಯ ನಡುವೆಯೇ ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನ ಮಾಡಲು ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯ ಅಂಬಲಪಾಡಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಯಿಂದ ರೊಚ್ಚಿಗೆದ್ದ ಭಕ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಆದರೆ, ಸ್ಥಳೀಯ ಮುಖಂಡರಾದ ವಿಷ್ಣು ಶೆಟ್ಟಿ ಅವರು ಮಧ್ಯಪ್ರವೇಶಿಸಿ, ಜನರಿಂದ ಹಲ್ಲೆಯಾಗದಂತೆ ಆರೋಪಿಗಳಿಬ್ಬರನ್ನು ರಕ್ಷಿಸಿದ್ದಾರೆ.

ಪೊಲೀಸರಿಗೆ ಒಪ್ಪಿಸುವ ಸಂದರ್ಭದಲ್ಲಿ, ಆರೋಪಿ ಮಹಿಳೆಯರು ತಮಗೆ ಹುಷಾರಿಲ್ಲ ಎಂದು ಹೇಳಿಕೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ವಿಷ್ಣು ಶೆಟ್ಟಿ ಅವರು ತಮ್ಮ ವಾಹನದಲ್ಲಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ನಂತರ ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *