Breaking
25 Sep 2026, Fri

ಉಪ್ಪಿನಂಗಡಿಯಲ್ಲಿ ಮಾದಕ ವಸ್ತು ಸಾಗಾಟ, ಸ್ವತ್ತು ಸಹಿತ ಆರೋಪಿ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ ರಜಾಕ್(43) ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿಯಿಂದ ಒಂದು ಪ್ಲಾಸ್ಟಿಕ್ ಕವರಿನಲ್ಲಿದ್ದ 12.35 ಗ್ರಾಂ ತೂಕದ 20.000 ರೂ ಮೌಲ್ಯ ಎಂಡಿಎಂಎ ಮಾದಕ ವಸ್ತು ಕಂಡು ಬಂದಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೇ 10 ಸಾವಿರ ರೂಪಾಯಿ ಮೌಲ್ಯದ ಒಂದು ಮೊಬೈಲ್, 3 ಲಕ್ಷ ಮೌಲ್ಯದ ಟೊಯೊಟಾ ಕಂಪೆನಿಯ ಕ್ಯಾಂಬ್ರಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *