ಮಿರ್ಜಾಪುರ: ಪ್ರಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಗಾಯಕ ಮತ್ತು ಪದ್ಮವಿಭೂಷಣ ಪಂಡಿತ್ ಛನ್ನುಲಾಲ್ ಮಿಶ್ರಾ (89) ಗುರುವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳುತ್ತಿದ್ದ ಅವರು ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಮಿಶ್ರಾ ಅವರು ಸಂಗೀತ ಕ್ಷೇತ್ರದ ಸಾಧನೆಯ ಹಾದಿಯಲ್ಲಿ ಮುಂಬಯಿಯ ಸುರ್ ಸಿಂಗರ್ ಸಂಸದ್ನ ‘ಶಿರೋಮಣಿ ಪ್ರಶಸ್ತಿ’ ಗೆದ್ದಿದ್ದರು. 2010, ಜನವರಿ 25 ರಂದು ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು 2020 ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಗಿತ್ತು.
ಮೃತರು ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ



