Breaking
22 Mar 2026, Sun

ಬೆಂಗಳೂರಿನ ಯಲಚೇನಹಳ್ಳಿಯಲ್ಲಿ ಚಾರ್ಜಿಂಗ್ ಸ್ಟೇಷನ್ ಓವರ್‌ಹೀಟ್ ಆಗಿ ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಚಾರ್ಜಿಂಗ್ ಸ್ಟೇಷನ್ ಓವರ್‌ಹೀಟ್ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನ ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ನಡೆದಿದೆ.

ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್ ಹೀಟ್ ಆದ ಪರಿಣಾಮ ಅಲ್ಲಿದ್ದ 19 ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ಜೊತೆಗೆ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಆರು ಸಿಲಿಂಡರ್‌ಗಳ ಗ್ಯಾಸ್ ಸೋರಿಕೆಯಾಗಿದ್ದು, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ ಅನ್ನುವ ಮಾಹಿತಿ ಇದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *