ಉಡುಪಿ: ತುರ್ತು ಸಂದರ್ಭದಲ್ಲಿ ಗಾಯಗೊಂಡವರು ಮತ್ತು ಅಸ್ವಸ್ಥಗೊಂಡವರ ರಕ್ಷಣಾ ಕಾರ್ಯದ ಬಗ್ಗೆ ಉಡುಪಿಯಲ್ಲಿ ಪ್ರಾತ್ಯಕ್ಷಿಕೆ ನಡೆಯಿತು.
ಇಂದ್ರಾಳಿ ರೈಲ್ವೆ ನಿಲ್ದಾಣ ಸಮೀಪ ಈ ಪ್ರಾತ್ಯಕ್ಷಿಕೆಯನ್ನು ಆಯೋಜನೆ ಮಾಡಲಾಗಿತ್ತು.

ಈ ವೇಳೆ ರೈಲ್ವೆ ಪೊಲೀಸರ ಜೊತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಭಾಗಿಯಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡು ತುರ್ತು ಸಂದರ್ಭದಲ್ಲಿ ಅನುಸರಿಸಬೇಕಾದ ಉಪಯುಕ್ತ ಮಾಹಿತಿಗಳನ್ನು ನೀಡಿದರು.



