Breaking
21 Mar 2026, Sat

ಮುಡಾ ಪ್ರಕರಣ: ಸಚಿವ ಭೈರತಿ ಸುರೇಶ್, ಲೋಕಾಯುಕ್ತ SP ವಿರುದ್ಧ DGPಗೆ ಸ್ನೇಹಮಯಿ ಕೃಷ್ಣ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್​​ಪಿ ಸಜಿತ್ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ದೂರು ನೀಡಿದ್ದಾರೆ.

ಡಿಜಿಪಿ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಕಳೆದ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ಲೋಕಾಯುಕ್ತ ನಿರ್ಧರಿಸಿತ್ತು. ಈ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಎಸ್ ಪಿ ಸಜಿತ್ ಅವರು ಭೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು.ಈ ವಿಚಾರ ತಿಳಿದ ಕೂಡಲೇ ಭೈರತಿ ಸುರೇಶ್‌ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಅದೇ ದಾಖಲೆಗಳನ್ನ ಬಿಡುಗಡೆ ಮಾಡಿದ್ದರು. ಸಚಿವರು ದಾಖಲೆಗಳನ್ನ ತೆಗೆದುಕೊಂಡು‌ ಹೋಗಲು ಲೋಕಾಯುಕ್ತ ಎಸ್ಪಿ ಸಹಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *