ಕೊಲ್ಲೂರು: ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಅಣ್ಣಾಮಲೈ ಅವರು ಇಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ದೇವಿ ದರ್ಶನಕ್ಕಾಗಿ ಮುಂಜಾನೆಯೇ ದೇವಾಲಯಕ್ಕೆ ಅವರು ಆಗಮಿಸಿದ್ದರು.ಈ ವೇಳೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅಣ್ಣಾಮಲೈ ಅವರಿಗೆ ವಿಶೇಷ ಗೌರವ ಅರ್ಪಣೆ ಮಾಡಲಾಯಿತು.
ಕೆಲಹೊತ್ತು ಸರತಿ ಸಾಲಿನಲ್ಲಿ ನಿಂತು ಭಕ್ತರೊಂದಿಗೆ ಮಾತನಾಡಿದ ಅಣ್ಣಾಮಲೈ ಅವರು ಬಳಿಕ ಅಲ್ಲಿಂದ ತೆರಳಿದರು.



