Breaking
24 Dec 2024, Tue

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅ. 15ರಂದು ಬಂಟ್ವಾಳಕ್ಕೆ ಭೇಟಿ ಹಿನ್ನೆಲೆ ಪ್ರಮುಖರ ಸಭೆ

ಬಂಟ್ವಾಳ: ವಿಧಾನಪರಿಷತ್ ಚುನಾವಣೆಯ ಪ್ರಯುಕ್ತ ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯರ ಸಮಾವೇಶಕ್ಕೆ ಅಗಮಿಸುತ್ತಿರುವ ರಾಜ್ಯಾಧ್ಯಕ್ಷರಾದ ಬಿ ವೈ ವಿಜೇಂದ್ರ ಅವರ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸುವ ಸಂಬಂಧಿಸಿದಂತೆ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ನೇತ್ರತ್ವದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಅವರ ಉಪಸ್ಥಿತಿಯಲ್ಲಿ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ಪ್ರಮುಖರ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು “ಬಿಜೆಪಿ ಅಭ್ಯರ್ಥಿಯಾದ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಗೆಲುವು ಸಾಧಿಸುವುದು ಖಚಿತ, ಆದರೆ ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಪ್ರಮುಖರು ಒಂದಾಗಿ ಕೆಲಸ ಮಾಡಬೇಕು ಎಂದರು”.

ಗೆಲುವು ನಿಶ್ಚಿತ ಎಂದು ಮೈಮರೆಯುವಿಕೆ ರಾಜಕಾರಣದಲ್ಲಿ ಉತ್ತಮ ಬೆಳವಣಿಗೆ ಅಲ್ಲ, ಚುನಾವಣಾ ಸಂದರ್ಭದಲ್ಲಿ ವಿರೋಧಿಗಳ ಚಲನವಲನಗಳನ್ನು ಗಮನಿಸಿ, ತಂತ್ರಗಳಿಗೆ ಪ್ರತಿತಂತ್ರ ರೂಪಿಸಿ, ಅಂತಿಮವಾಗಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ಹೆಚ್ಚಿನ ಮುತುವರ್ಜಿವಹಿಸಬೇಕು ಎಂದರು. ಸಂಘಟನಾತ್ಮಕ ಮಟ್ಟದಲ್ಲಿ ಬಿಜೆಪಿಯ ಕಾರ್ಯಕರ್ತರು ಕೆಲಸ ಮಾಡಿದಾಗ ಪ್ರತಿಚುನಾವಣೆಗಳು ಬಿಜೆಪಿಯ ದಿನಗಳಾಗಲಿವೆ ಎಂದು ತಿಳಿಸಿದರು.

ಚೆನ್ನಪ್ಪ ಆರ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರವಾಸ ಪ್ರಮುಖ್ ದೇವದಾಸ್ ಶೆಟ್ಟಿ, ವಿಧಾನ ಪರಿಷತ್ ಚುನಾವಣಾ ಸಹಸಂಚಾಲಕ ರಾಕೇಶ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ,ಯತೀಶ್ ಅರ್ವಾರ, ಪ್ರಮುಖರಾದ ವಿಕಾಶ್ ಪುತ್ತೂರು, ಬಂಟ್ವಾಳ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ಮಂಡಲದ ಚುನಾವಣಾ ಸಂಚಾಲಕ ಪ್ರಭಾಕರ್ ಪ್ರಭು, ಸಹಸಂಚಾಲಕ ಸಂಜೀವ ಪೂಜಾರಿ ಪಿಲಿಂಗಾಲು ಉಪಸ್ಥಿತರಿದ್ದರು.

ಸಭೆಯಲ್ಲಿ ಮಾಜಿ ಶಾಸಕರುಗಳು, ಬಂಟ್ವಾಳ ವಿಧಾನಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಅ. 15 ರಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಬಂಟ್ವಾಳಕ್ಕೆ ಆಗಮಿಸಲಿದ್ದು, ಜಿಲ್ಲೆಯ ಗ್ರಾ.ಪಂ.ಸದಸ್ಯರ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಬಂಟ್ವಾಳದ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು,ವಿಧಾನ ಪರಿಷತ್ ಚುನಾವಣೆ ಸಂಬಂಧಿಸಿದ ರೂಪುರೇಷೆಗಳ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ ಎಂದು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *