Breaking
25 Sep 2026, Fri

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಮತ್ತೆ ಬುಲಾವ್

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಆರು ಮಂದಿ ಯೂಟ್ಯೂಬರ್ ಗಳು ಅ.3 ರಂದು ವಿಚಾರಣೆಗೆ ಹಾಜರಾಗಲು ಎಸ್.ಐ.ಟಿ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

ಇದರ ಜೊತೆಗೆ ಹೋರಾಟಗಾರ ಜಯಂತ್.ಟಿ ಮಗ ಜೀವನ್ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಯೂಟ್ಯೂಬರ್ ಗಳಾದ ಡಿ ಟಾಸ್ಕ್ ಯೂಟ್ಯೂಬರ್ ದಿನೇಶ್, ದೂತ ಯೂಟ್ಯೂಬರ್ ಸಮೀರ್.ಎಮ್.ಡಿ , ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಸಂತೋಷ್ ಕಡಬ, ಕುಡ್ಲ ರಾಮ್ ಪೇಜ್ ಯೂಟ್ಯೂಬರ್ ಅಜಯ್ ಅಂಚನ್, ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಸೇರಿ ಒಟ್ಟು ಆರು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹೋರಾಟಗಾರ ಜಯಂತ್.ಟಿ ಮಗ ಜೀವನ್ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ವಿಡಿಯೋ ಮಾಡಿದ ಪ್ರಕರಣಕ್ಕೆ ವಿಚಾರಣೆ ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *