Breaking
22 Mar 2026, Sun

ದುರ್ಗಾ ಮೂರ್ತಿ ವಿಸರ್ಜನೆಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ‍್ಯಾಕ್ಟರ್ ಟ್ರಾಲಿ ಕೆರೆಗೆ ಬಿದ್ದು 11 ಮಂದಿ ಸಾವು

ಮಧ್ಯಪ್ರದೇಶ: ದುರ್ಗಾ ಮೂರ್ತಿ ವಿಸರ್ಜನೆಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ‍್ಯಾಕ್ಟರ್ ಟ್ರಾಲಿ ಕೆರೆಗೆ ಉರುಳಿಬಿದ್ದು 11 ಮಂದಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಅರ್ಡ್ಲಾ ಮತ್ತು ಜಮ್ಲಿ ಗ್ರಾಮಗಳ ಸುಮಾರು 20-25 ಜನರು ದುರ್ಗಾ ಮೂರ್ತಿ ವಿಸರ್ಜನೆಗಾಗಿ ಟ್ರಾಲಿಯಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ, ಅವರಲ್ಲಿ ಹೆಚ್ಚಿನವರು ಹದಿಹರೆಯದ ಹುಡುಗಿಯರು ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ದುಃಖ ವ್ಯಕ್ತಪಡಿಸಿ ಎಕ್ಸ್ ಪೋಸ್ಟ್ ಮಾಡಿದ್ದು, ದುರಂತದಲ್ಲಿ ಮೃತರ ಕುಟುಂಬಗಳಿಗೆ ನಾನು ನನ್ನ ಸಂತಾಪ ಸೂಚಿಸುತ್ತೇನೆ. ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುತ್ತೇವೆ. ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Leave a Reply

Your email address will not be published. Required fields are marked *