ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ಅ. 1 ರಂದು ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.
ಈ ವೇಳೆ ಅರ್ಚಕ ಗೋಪಾಲಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.
ಬಳಿಕ ಮಂಗಳೂರಿನ ಕರಾವಳಿ ಮೈದಾನದಲ್ಲಿ ಆಯೋಜಿಸಲಾಗಿದ್ದ 10ನೇ ವರ್ಷದ ಪಿಲಿನಲಿಕೆ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಪಾಲ್ಗೊಂಡರು.





