Breaking
25 Sep 2026, Fri

ಉಡುಪಿಯ ಗುಂಡಿಬೈಲುವಿನಲ್ಲಿ ಜಿಲ್ಲಾ ಬಿಜೆಪಿ ನೂತನ ಕಟ್ಟಡ ಶಿಲಾನ್ಯಾಸ

ಉಡುಪಿ: ಉಡುಪಿಯ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸ ಹಾಗೂ ಕಾರ್ಯಕರ್ತರ ಸಮಾವೇಶ ಗುಂಡಿಬೈಲುವಿನಲ್ಲಿ ಅ.3 ರಂದು ನಡೆಯಿತು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ , ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ ಹಾಗೂ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *