Breaking
25 Sep 2026, Fri

ಉಜಿರೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ

ಉಜಿರೆ: ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಉಜಿರೆ ಸಮೀಪದ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅ.3 ರಂದು ನಡೆದಿದೆ.

ಚಾರ್ಮಾಡಿ ಕಡೆಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಉಜಿರೆಯಿಂದ ಚಾರ್ಮಾಡಿ ಕಡೆಗೆ ಹೋಗುವ ಕಾರು ನಡುವೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬೈಕ್ ನಲ್ಲಿ ಪ್ರಯಾಣಿಸುತಿದ್ದ ಸಹಸವಾರನಿಗೆ ಗಾಯಗಳಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಯಾವುದೇ ರೀತಿಯ ಪ್ರಾಣಾಪಾಯ ಅಪಾಯ ಸಂಭವಿಸಿಲ್ಲ.

Leave a Reply

Your email address will not be published. Required fields are marked *