Breaking
23 Mar 2026, Mon

ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಬಂಧಿಸಿದ ಉರ್ವ ಪೊಲೀಸರು

ಮಂಗಳೂರು: ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ ನಿವಾಸಿ, ಪ್ರಸಕ್ತ ಕೂಳೂರು ರಾಯಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕೃಷ್ಣ ಕುಮಾರ್ (20), ಗದಗ ಜಿಲ್ಲೆ ಶಿರಹಟ್ಟಿ ತಾಲೂಕು ಯಳವತ್ತಿ ಗ್ರಾಮ ನಿವಾಸಿ, ಪಡೀಲ್ ಕೊಡಕ್ಕಲ್‌ನಲ್ಲಿ ವಾಸವಾಗಿರುವ ಬಸಯ್ಯ ಶಂಕರಯ್ಯ ಮಠಪತಿ (23) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ ಅಂದಾಜು 20,200 ರೂ. ಮೌಲ್ಯದ 1 ಕೆ.ಜಿ. 364 ಗ್ರಾಂ. ಗಾಂಜಾ, ಎರಡು ಮೊಬೈಲ್, 13 ಖಾಲಿ ಜಿಪ್ ಕವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉರ್ವ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *