ಬಂಟ್ವಾಳದಲ್ಲಿ ಮದರಸವೊಂದಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ, ದೂರು ದಾಖಲು

ಬಂಟ್ವಾಳ: ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನಾ ಸಂಬಂಧವ್ಯಕ್ತಿಯೋರ್ವನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

5ನೇ ತರಗತಿ ಕಲಿಯುತ್ತಿರುವ ಬುದ್ದಿಮಾಂದ್ಯ ಬಾಲಕಿ ಮದರಸಕ್ಕೆ ಬಂದಿದ್ದ ವೇಳೆ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *