Breaking
22 Mar 2026, Sun

ಶಿವಮೊಗ್ಗದಲ್ಲಿ ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ: ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ಆರ್.ಎಂ.ಎಲ್. ನಗರದಲ್ಲಿ ನಡೆದಿದೆ.

ಬುದ್ಧ ನಗರದ ಮಾರ್ನಮಿಬೈಲು ನಿವಾಸಿ ಅಮ್ಜದ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.

ಶಿವಮೊಗ್ಗದ ಆರ್.ಎಂ.ಎಲ್. ನಗರದ ಭಾರತ್ ಫೌಂಡ್ರಿ ಹಿಂಭಾಗದಲ್ಲಿ ಶಾಹಿದ್ ಎಂಬವರ ಜೊತೆ ಅಮ್ಜದ್ ನಿಂತಿದ್ದಾಗ ದುಷ್ಕರ್ಮಿಗಳು ಕೈ ಬೆರಳು ಸೇರಿದಂತೆ ದೇಹದ ವಿವಿಧ ಭಾಗಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಹಲ್ಲೆಯಿಂದ ಅಮ್ಜದ್ ನ ಸ್ಥಿತಿ ಗಂಭೀರವಾಗಿದ್ದು, ಶಾಹಿದ್ ಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *