Breaking
23 Mar 2026, Mon

ಬಿಜೆಪಿ ಹಿರಿಯ ಮುಖಂಡ ,ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್ ನಿಧನ

ಕಾರ್ಕಳ:ಬಿಜೆಪಿ ಹಿರಿಯ ಮುಖಂಡ , ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್ (82) ಅ.3 ರಂದು ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಾಯಂಕಾಲ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಮೇಲೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ತಮ್ಮ ವಕೀಲ ವೃತ್ತಿಯಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಎಂ.ಕೆ ವಿಜಯಕುಮಾರ್ ಅವರು ರಾಜಕೀಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಇಳಿವಯಸ್ಸಿನಲ್ಲೂ ನ್ಯಾಯವಾದಿಯಾಗಿ ಕಕ್ಷಿದಾರರ ಪರವಾಗಿ ತಾವೇ ಕೋರ್ಟ್ ನಲ್ಲಿ ವಾದಿಸುತ್ತಿದ್ದರು.

ಎಂ.ಕೆ ವಿಜಯಕುಮಾರ್ ಅವರ ನಿಧನಕ್ಕೆ ಅವರ ಶಿಷ್ಯ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಝೀರ್, ಮಾಜಿ ಸಿಎಂ ಡಾ.ಎಂ ವೀರಪ್ಪ ಮೊಯ್ಲಿ ,ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *