Breaking
19 Sep 2026, Sat

ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಅಚೇಪಲ್ಲಿ ಗ್ರಾಮದ ವಿಷ್ಣು (14), ನಿಹಾಲ್ ರಾಜ್ (12) ಮತ್ತು ಹರ್ಷವರ್ಧನ್ (16) ಮೃತ ದುರ್ದೈವಿಗಳು.

ದಸರಾ ರಜೆ ಹಿನ್ನೆಲೆ ಶಾಲೆಗಳಿಗೆ ರಜೆ ಇದ್ದುದ್ದರಿಂದ ಬಾಲಕರು ಕೆರೆಯಲ್ಲಿ ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *