ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಎನ್.ಎಚ್-44 ರ ಬೀಚಗಾನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅ.2ರ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಹುಲಿಯೂರು ಗ್ರಾಮದ ನಿವಾಸಿ ನಂದಿನಿ (35) ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವರ್ಲಕೊಂಡ ಮತ್ತು ಜಯಂತಿ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಗುರುವಾರ ತಡರಾತ್ರಿ ಸುಮಾರು ರಾತ್ರಿ 2.30ರ ಹೊತ್ತಿಗೆ ಇನ್ನೋವಾ ಕಾರು ಎದುರಿನಲ್ಲಿ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಏಳು ಮಂದಿ ಪ್ರಯಾಣಿಕರು ಇದ್ದಿದ್ದು, ಉಳಿದ ಆರು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಗುಡಿಬAಡೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




