Breaking
11 May 2026, Mon

ಅಡುಗೆ ಮಾಡದೇ ಇದ್ದುದಕ್ಕೆ ತಾಯಿ ದೊಣ್ಣೆಯಿಂದ ಹೊಡೆದು ಕೊಂದ ಮಗ

ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ನಡೆದ ಜಗಳ ತಾರಕಕ್ಕೇರಿ ತಾಯಿಯ ಕೊಲೆಯಲ್ಲಿ ಅಂತ್ಯವಾಗಿರುವುದು ಹಾಸನದ ಆಲೂರಿನ ಕದಾಳುಚನ್ನಾಪುರ ಎಂಬ ಗ್ರಾಮದಲ್ಲಿ ನಡೆದಿದೆ.

ಪ್ರೇಮ (45) ಮಗನಿಂದಲೇ ಕೊಲೆಯಾದ ತಾಯಿಯಾಗಿದ್ದು, ವಿ. ಸಂತೋಷ್ (19) ಹೆತ್ತ ತಾಯಿಯನ್ನೇ ಕೊಲೆಗೈದ ಪಾಪಿ ಮಗನಾಗಿದ್ದಾನೆ.

ಗುರುವಾರ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಈತ ಅಡುಗೆ ಮಾಡದಿದ್ದಕ್ಕೆ ಜಗಳ ತೆಗೆದು, ಮಾತಿಗೆ ಮಾತು ಬೆಳೆದು ದೊಣ್ಣೆಯಿಂದ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದ.

ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಪ್ರೇಮರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಆಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *