Breaking
22 Mar 2026, Sun

ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ

ಬೆಂಗಳೂರು: ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ಅ.4 ರಂದು ಬೆಳಗ್ಗೆನಡೆದಿದೆ.

ಇಂದು ಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಚಿತ್ರದುರ್ಗದಿಂದ ನೆಲಮಂಗಲದ ದಾಸನಪುರ ಎಪಿಎಂಸಿಗೆ ಬರುತ್ತಿತ್ತು.

ಈ ವೇಳೆ ಮಾರ್ಗಮಧ್ಯೆ ಲಾರಿಯ ಇಂಜಿನ್‌ನಲ್ಲಿ ಶಾರ್ಟ್ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಈರುಳ್ಳಿ ಬೆಂಕಿಗಾಹುತಿಯಾಗಿದೆ. ಲಾರಿಯ ಚಾಲಕ ಹಾಗೂ ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *