ಕೋಲಾರ:ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯಲ್ಲಿ ನಡೆದಿದೆ.
ಮೃತರನ್ನು ಧನ್ಯಾಬಾಯಿ (13), ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ.

ಮನೆ ಮುಂದೆ ಆಟವಾಡಲು ಹೋಗಿದ್ದ ವೇಳೆ ಬಾಲಕಿಯರು ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ, ಇದೀಗ ಬಾಲಕಿಯರು ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




