ಬಂಟ್ವಾಳ: ಕನ್ಯಾನ ಗ್ರಾಮದ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡಿಬೈಲ್ ಶ್ರೀ ಶಂಕರನಾರಾಯಣ ಭಟ್ ಇವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯು ಅ. 04 ರಂದು ನಡೆಯಿತು.


ಈ ಪೂಜೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರೀ ದೇವಿ ಸೇವಾ ಟ್ರಸ್ಟ್, ಶ್ರೀ ಮಾತಾ ಯುವ ಸೇವಾ ಸಂಘ, ಮಾತೃ ಮಂಡಳಿಯ ಸದಸ್ಯರು ಉಸಸ್ಥಿತರಿದ್ದರು.





