Breaking
19 Sep 2026, Sat

ವರದಕ್ಷಿಣೆ ಕಿರುಕುಳ: ವಿವಾಹಿತೆ ನೇಣುಬಿಗಿದು ಆತ್ಮಹತ್ಯೆಗೆ ಶರಣು

ಬೆಂಗಳೂರು: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ತಲಘಟ್ಟಪುರದ ಅವಲಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ನವ್ಯ (28) ಎಂದು ಗುರುತಿಸಲಾಗಿದೆ.

ನಾಲ್ಕು ವರ್ಷದ ಹಿಂದೆ ನವ್ಯ ಅವರು ನಗರದ ಸಾಫ್ಟ್‌ವೇರ್ ಇಂಜಿನಿಯರ್ ಶೈಲೇಶ್‌ನನ್ನು ಮದುವೆಯಾಗಿದ್ದರು. ಇತ್ತೀಚೆಗೆ ಪತಿ ಶೈಲೇಶ್ ಮತ್ತವರ ಮನೆಯವರು ವರದಕ್ಷಿಣೆ ತರುವಂತೆ ಮಹಿಳೆಗೆ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದ್ದು,ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಪತಿ ಶೈಲೇಶ್ ನವ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *