ಮಂಗಳೂರು – ಪೊಳಲಿ ನೂತನ ಸರಕಾರಿ ಬಸ್ ನ ವೇಳಾಪಟ್ಟಿ ಪ್ರಕಟ

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ 3 ಘಟಕದಿಂದ ಪ್ರಯಾಣಿಕರ, ಸಾರ್ವಜನಿಕ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ನಂತೂರು-ವಾಮಂಜೂರು-ಕೆತ್ತಿಕಲ್ ಬೊಂಡಂತಿಲ-ತಾರಿಗುಡ್ಡೆ ಮಾರ್ಗವಾಗಿ ಪೊಳಲಿಗೆ ನೂತನ ನಗರ ಸಾರಿಗೆ ಚಾಲನೆ ದೊರತಿದೆ.

ಕರ್ನಾಟಕ ಸರಕಾರದ ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯ ಬಿ.ಎಲ್.ಪದ್ಮನಾಭ ಕೋಟ್ಯಾನ್ ಚಾಲನೆ ನೀಡಿದ್ದಾರೆ.

ಈ ಸಂದರ್ಭ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ವಿಭಾಗೀಯ ಸಂಚಾರ ಅಧಿಕಾರಿ ಕಮಲ್ ಕುಮಾರ್, ವಿಭಾಗೀಯ ಯಾಂತ್ರಿಕ ಅಭಿಯಂತರ ವಿನಯ್ ಹಾಗೂ ವಿಭಾಗದ ಅಧಿಕಾರಿಗಳು, ಸಿಬ್ಬಂದಿ, ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಹೀಗಿದೆ ಮಂಗಳೂರು – ಪೊಳಲಿ ನೂತನ ಬಸ್ ನ ವೇಳಾಪಟ್ಟಿ ಇಲ್ಲಿದೆ ಮಂಗಳೂರು ಬಸ್ಸು ನಿಲ್ದಾಣದಿಂದ ಪೊಳಲಿಗೆ ಹೊರಡುವ ಸಮಯ : ಬೆಳಿಗ್ಗೆ 6:00, 8:45, 11:40, 3:30, 6:30.
ವಯಾ : ಪಿ.ವಿ.ಎಸ್, ಬಂಟ್ಸ್ ಹಾಸ್ಟೆಲ್, ನಂತೂರು, ಬಿಕರ್ನಕಟ್ಟೆ, ಕುಲಶೇಖರ, ಬೈತುರ್ಲಿ, ಕುಡುಪು, ವಾಮಂಜೂರು, ಕೆತ್ತಿಕಲ್, ಬೊಂಡAತಿಲ, ತಾರಿಗುಡ್ಡೆ, ಬದ್ರಿಯಾನಗರ, ಮಲ್ಲೂರು, ಕಲಾಯಿ, ಅಮ್ಮುಂಜೆ, ಬಡಕಬೈಲು, ಪುಂಚಮೆ.

ಪೊಳಲಿಯಿಂದ ಮಂಗಳೂರಿಗೆ ಹೊರಡುವ ಸಮಯ: 6.55,10:10, 1:50, 4:35, 8:00.

ವಯಾ : ಪುಂಚಮೆ, ಬಡಕಬೈಲು, ಅಮ್ಮುಂಜೆ ಕಲಾಯಿ, ಮಲ್ಲೂರು.

Leave a Reply

Your email address will not be published. Required fields are marked *