Breaking
22 Mar 2026, Sun

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ನಿಧನ

ಭಾರತೀಯ ಉದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡು ಜನಪ್ರಿಯತೆ ಗಳಿಸಿದ್ದ ಹೆಮ್ಮೆಯ ರತನ್‌ ಟಾಟಾ ಅವರು ಇನ್ನಿಲ್ಲ.

ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದು ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲರನ್ನು ಅಗಲಿದ್ದಾರೆ.

ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ ಅಭಿಮಾನಿಗಳು ಒಪ್ಪಿರಲಿಲ್ಲ.

ರತನ್‌ಟಾಟಾ ಅವರನ್ನು ಸೋಮವಾರ ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರಂಭದಲ್ಲಿ ಅವರು ಸಾಮಾನ್ಯ ಆರೋಗ್ಯ ಪರೀಕ್ಷೆ ಒಳಪಟ್ಟಿದ್ದಾರೆ ಎಂದೇ ಹೇಳಲಾಗಿತ್ತು. ಅಲ್ಲದೇ ಅವರು ಸಹ ನಾನು ಆರೋಗ್ಯವಾಗಿಯೇ ಇದ್ದೇನೆ. ಚಿಂತಿಸಬೇಡಿ ಎಂದೇ ಹೇಳಿದ್ದರು. ಆದರೆ, ಅವರ ಆರೋಗ್ಯದ ಬಗ್ಗೆ ಅನುಮಾನಗಳು ಮೂಡಿದ್ದವು. ಅದರಂತೆ ಬುಧವಾರ ಸಂಜೆಯ ವೇಳೆಗೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎನ್ನುವ ವರದಿಗಳು ಬರಲು ಪ್ರಾರಂಭಿಸಿತ್ತು. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.

ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅವರಿಗೆ 86 ವರ್ಷವಾಗಿತ್ತು. ಅವರು ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದರು.

Leave a Reply

Your email address will not be published. Required fields are marked *