Breaking
23 Mar 2026, Mon

ಸ್ಪೀಕರ್ ಯು.ಟಿ ಖಾದರ್ ಸೇರಿ ಮೂವರಿಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಬೆಂಗಳೂರು : ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸಹಿತ ಮೂವರು ಸಾಧಕರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯವು ತಿಳಿಸಿದೆ.

ಅ.8ರಂದು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ 60ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪದವಿ ಪ್ರದಾನ ಮಾಡಲಾಗುವುದು.

ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ.ಮಾದೇಗೌಡ ಹಾಗೂ ಜೆ.ಪಿ.ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *