ಬೆಳ್ತಂಗಡಿ : ಬೆಂಕಿ ಅನಾಹುತ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಲ್ಲಿ ಅ.6 ರಂದು ರಾತ್ರಿ ನಡೆದಿದೆ.
ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ಹರೀಶ್ ಅವರು ಭಜನೆಯ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ಈ ವೇಳೆ ಬೆಂಕಿ ಅನಾಹುತ ಉಂಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳೆಲ್ಲ ಸಂಪೂರ್ಣ ಸುಟ್ಟು ಹೋಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು ,ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ.




