Breaking
9 May 2026, Sat

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕಿಗೆ ಕೀಟಲೆಗೆ ಯತ್ನ,ಆರೋಪಿಯ ಬಂಧನ

ಕಾಸರಗೋಡು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಬ್ಯಾಗ್ ಹಿಡಿದೆಳೆದು ನಿಲ್ಲಿಸಿ ಕೀಟಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಾಸರಗೋಡುವಿನ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕಿರಣ್(38) ಎಂದು ಗುರುತಿಸಲಾಗಿದೆ.

ಈತ ಶನಿವಾರದಂದು ಸಾಯಂಕಾಲ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕಿಯ ಬ್ಯಾಗ್ ಹಿಡಿದೆಳೆದು ಉಪದ್ರ ನೀಡಲು ಯತ್ನಿಸಿದ್ದ ಎನ್ನಲಾಗಿದೆ. ಈ ವೇಳೆ ಸ್ಥಳೀಯರು ಕಿರಣ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *