ಮಂಜೇಶ್ವರ: ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಗೈದ ಘಟನೆ ಮಂಜೇಶ್ವರ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ನಡೆದಿದೆ.
ಕಡಂಬಾರ್ ಚೆಂಬದಪದವು ನಿವಾಸಿ ಅಜಿತ್ ( 35) ಮತ್ತು ಪತ್ನಿ ಯುವ ಶಿಕ್ಷಕಿ ಶ್ವೇತಾ ( 27) ವಿಷ ಸೇವಿಸಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಂಪತಿ 2 ವರ್ಷದ ಗಂಡು ಮಗುವನ್ನು ಅಗಲಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




