ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ಎಂಬಲ್ಲಿ ನಡೆದಿದೆ.
ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಈ ಕಳ್ಳತನವಾಗಿದೆ.

ಅ.2ರಂದು ಮನೆಗೆ ಬೀಗ ಹಾಕಿ ಮನೆಯವರು ಹೋಗಿದ್ದು ಅ.6 ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ಬಿಗ ಒಡೆದು ಒಳ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು ಅದರೊಳಗೆ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ ಮುತ್ತಿನ ಸರ, ಚಿನ್ನದ ಬ್ರಾಸ್ ಲೈಟ್, ಮಕ್ಕಳ ಎರಡು ಸರಗಳು, ಒಂದು ಉಂಗುರ, ಒಂದು ಬೆಂಡೋಲೆ, ಚಿನ್ನದ ಉಂಗುರಗಳು ಸೇರಿದಂತೆ ಸುಮಾರು 149 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು, ಅದರ ಮೌಲ್ಯ ಸುಮಾರು 9,50,000 ಎಂದು ಅಂದಾಜಿಸಲಾಗಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



