Breaking
9 May 2026, Sat

ನೆರಿಯದಲ್ಲಿ ಮನೆಗೆ ಬೆಂಕಿ ಬಿದ್ದು ಹಾನಿ, ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಕಿರಣ್ ಚಂದ್ರ ಡಿ ಪುಷ್ಪಗಿರಿ

ಬೆಳ್ತಂಗಡಿ : ತಾಲೂಕಿನ ನೆರಿಯ ನಿವಾಸಿಯಾಗಿರುವ ಹರೀಶ್ ವಿ. ಮನೆಗೆ ಅ.6 ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಅವರ ಮನೆಗೆ ಉದ್ಯಮಿ, ಸಮಾಜ ಸೇವಕ ಕಿರಣ್ ಚಂದ್ರ ಡಿ ಪುಷ್ಪಗಿರಿಯವರ ಟೀಂ ಪುಷ್ಪಗಿರಿ ತಂಡದ ಸದಸ್ಯರು ಭೇಟಿ ನೀಡಿ ಮನೆಯ ಪುನರ್ನಿರ್ಮಾಣ ಕಾರ್ಯಕ್ಕೆ 25 ಸಾವಿರ ರೂಪಾಯಿಗಳ ಧನ ಸಹಾಯವನ್ನು ಹಸ್ತಾಂತರಿಸಿದರು.

ಈ ವೇಳೆ ಮನೆಯವರ ಜೊತೆ ಕರೆ ಮಾಡಿ ಮಾತನಾಡಿದ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಮನೆಯ ದುರಸ್ತಿ ಕಾರ್ಯಕ್ಕೆ ಇನ್ನಷ್ಟು ಆರ್ಥಿಕ ಸಹಾಯ ಮಾಡುವುದಾಗಿ ಕುಟುಂಬದ ಸದಸ್ಯರಿಗೆ ಭರವಸೆ ನೀಡಿದರು.

ಈ ಸಂದರ್ಭ ಉಜಿರೆ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷರಾದ ಬಾಬು ಗೌಡ ನೆರಿಯ, ತೋಟತ್ತಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಓಬಯ್ಯ ಗೌಡ ಚಿಬಿದ್ರೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಭರತ್ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *