ಬಂಟ್ವಾಳ: ಸಜೀಪದ ಶ್ರೀ ಕಾಳಾದ್ರಿ ಸಾನಿಧ್ಯ ಬಿಲ್ಲಪದವು ಕ್ಷೇತ್ರದಲ್ಲಿ ಅ. 21 ರಿಂದ ನ. 20 ರತನಕ ಕಾರ್ತಿಕ ದೀಪಾರಾಧನೆ ನಡೆಯಲಿದೆ.

ಈ ಕಾರ್ತಿಕ ದೀಪೋತ್ಸವದ ಆಮಂತ್ರಣ ಪತ್ರವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ನಿರ್ದೇಶಕ ರಾಜಾರಾಮ ಭಟ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ , ನೌಕಾದಳ ನಿವೃತ್ತ ಸೇನಾ ಕಮಾಂಡರ್ ವಸಂತ ರಾವ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರವೀಣ್ ಆಳ್ವ, ಸುಧಾಕರ, ಚೀಟಿ ಪ್ರವೀಣ್ ಭಂಡಾರಿ, ಸುಭಾಷ್ ಶೆಟ್ಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





