Breaking
22 Mar 2026, Sun

ಅ.18ರವರೆಗೆ ಸರಕಾರಿ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಕ್ಟೋಬರ್ 8 ರಿಂದ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಜೆ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಸಿಎಂ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಅನ್ನುವ ಮಾಹಿತಿ ಲಭ್ಯವಾಗಿದ್ದು, ಅಕ್ಟೋಬರ್ 18 ನೇ ತಾರೀಕಿನ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *