ಢಾಕಾ: ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ಕಳವು ಮಾಡಲಾಗಿದೆ.
ಈ ಕಿರೀಟವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2021 ರ ಮಾರ್ಚ್ ತಿಂಗಳಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಡುಗೊರೆಯಾಗಿ ನೀಡಿದ್ದರು ಎಂದು ವರದಿಯಾಗಿದೆ.
ಮಧ್ಯಾಹ್ನ 2.00 ರಿಂದ 2.30ರ ನಡುವೆ ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ. ದೇವರ ತಲೆಯಿಂದ ಕಿರೀಟ ಕಾಣೆಯಾಗಿದೆ ಎಂದು ಸ್ವಚ್ಛತಾ ಸಿಬ್ಬಂದಿ ತಿಳಿಸಿದ್ದಾರೆ. ಕಳ್ಳನನ್ನು ಗುರುತಿಸಲು ನಾವು ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಶ್ಯಾಮನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತೈಜುಲ್ ಇಸ್ಲಾಂ ತಿಳಿಸಿದ್ದಾರೆ.