ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆದು ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಎಂಬುದು ಅತ್ಯಂತ ಆಘಾತಕಾರಿ ಸಂಗತಿ.

ಮನುವಾದಿಗಳ ಮನಸ್ಥಿತಿ ಯಾವ ರೀತಿ ಇದೆ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಗ್ಗೆ ಕೇಂದ್ರ ಸರ್ಕಾರದ ನಿಲುವೇನು? ಪ್ರಧಾನಿ, ಗೃಹಮಂತ್ರಿ ಹಾಗೂ ಕಾನೂನು ಸಚಿವರು ಏನು ಉತ್ತರ ಕೊಡುತ್ತಾರೆ? ಎಂದು ಪ್ರಶ್ನಿಸಿದ ಅವರು ವಕೀಲನೇ ಈ ರೀತಿಯ ಕೃತ್ಯ ಎಸಗಿರುವುದು ಗಂಭೀರ ವಿಷಯ. ಪರಿಸ್ಥಿತಿ ಎಲ್ಲಿಯವರೆಗೆ ತಲುಪಬಹುದು ಎಂಬುದು ಊಹಿಸಲು ಅಸಾಧ್ಯ. ಆದ್ದರಿಂದ ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ ಅವರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡಬೇಕು. ಅಸಹಿಷ್ಣುತೆಯನ್ನು ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.




