Breaking
23 Mar 2026, Mon

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ..!

ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್(31) ಎಂಬವರನ್ನು ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಚ್ಚಿ ಹತ್ಯೆಗೈದ ಘಟನೆ ಅ.07ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಎಂಬಲ್ಲಿ ನಡೆದಿದೆ.

ಸುಮಾರು ಏಳೆಂಟು ಜನರ ಗುಂಪು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದು ವೆಂಕಟೇಶ್ ಅವರಿಗೆ ಹಿಗ್ಗಾಮುಗ್ಗ ತಲುವಾರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ರಾತ್ರಿ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ವೆಂಕಟೇಶ್ ಜೊತೆಗಿದ್ದ ಸ್ನೇಹಿತರುಗಳನ್ನು ಬೆದರಿಸಿ ಓಡಿಸಿದ್ದಾರೆ ಎನ್ನಲಾಗಿದೆ.

ಹಳೆ ದ್ವೇಷದ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಿಸಿದ್ಧಿ, ಶ್ವಾನದಳ ಹಾಗೂ ಬೆರಳಚ್ಚು ತಂಡದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *