ಮಧ್ಯಪ್ರದೇಶ: ಕೆಮ್ಮಿನ ಸಿರಫ್ ಸೇವಿಸಿ ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ 6 ಮಕ್ಕಳು ಮೃತಪಟ್ಟಿರುವ ಘಟನೆ ಅ.08 ರಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಕೆಲವು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಛಿಂದ್ವಾಡದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವನೆಯಿಂದ 14 ಮಕ್ಕಳು ಮೃತಪಟ್ಟಿದ್ದರು ಎಂದು ಸರ್ಕಾರ ದೃಢಪಡಿಸಿತ್ತು. ನಂತರ ಅ.7ರಂದು ಛಿಂದ್ವಾಡದಲ್ಲಿ 4 ಮಕ್ಕಳು ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ .

ಸಿರಪ್ ಸೇವನೆಯಿಂದ ಅಸ್ವಸ್ಥರಾದ ಮಕ್ಕಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಘೋಷಿಸಿದ್ದು, ಔಷಧಿ ಉತ್ಪಾದಕ ಕಂಪನಿಗೆ ತಮಿಳುನಾಡು ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.




